ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಹಳ್ಳ ಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿಯುತ್ತಿರುವ ಕಾರಣ ರಸ್ತೆಗಳು ಜಲಾವೃತವಾಗಿವೆ.
ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದೇ ಇದಕ್ಕೆ ಕಾರಣವೆಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಹೀಗಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.