ಕೆಟ್ಟ ಜೀವನಶೈಲಿಯಿಂದಾಗಿಯೇ ಅನೇಕ ಗಂಭೀರ ಕಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಹಾಗಾಗಿ ಅನಾರೋಗ್ಯಕರ ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುವುದು ಬಹಳ ಮುಖ್ಯ. ಕಳಪೆ ಜೀರ್ಣಾಂಗ ವ್ಯವಸ್ಥೆಯು ಅಜೀರ್ಣ ಮತ್ತು ಸ್ಥೂಲಕಾಯದಂತಹ ಅನೇಕ ಕಾಯಿಲೆಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಾಗಿ ತೂಕವು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ.
ಪ್ರತಿನಿತ್ಯ ಕಡಲೆಕಾಯಿ ಅಥವಾ ಶೇಂಗಾ ತಿನ್ನುವುದರಿಂದ ದೇಹದ ಚಯಾಪಚಯ ಸರಿಯಾಗಿರುತ್ತದೆ ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ. ಕಡಲೆಕಾಯಿ ಸೇವನೆಯಿಂದ ದೇಹವು ಶಕ್ತಿಯನ್ನು ಪಡೆಯುತ್ತದೆ ಮತ್ತು ಕೊಬ್ಬು ಕ್ರಮೇಣ ಕಡಿಮೆಯಾಗಲು ಪ್ರಾರಂಭಿಸುತ್ತದೆ.
ಕಡಲೆಕಾಯಿಯಲ್ಲಿ ಅನೇಕ ಪ್ರಯೋಜನಕಾರಿ ಅಂಶಗಳು ಕಂಡುಬರುತ್ತವೆ. ಹಾಲು ಮತ್ತು ಮೊಟ್ಟೆಗೆ ಹೋಲಿಸಿದರೆ ಕಡಲೆಕಾಯಿಯಲ್ಲಿ ಪ್ರೋಟೀನ್ ಪ್ರಮಾಣ ಹೆಚ್ಚಾಗಿದೆ. ಕಡಲೆಕಾಯಿಯಲ್ಲಿ ಫೈಬರ್ ಮತ್ತು ವಿಟಮಿನ್ಗಳು ಸಹ ಹೇರಳವಾಗಿ ಕಂಡುಬರುತ್ತವೆ. ಇದರಲ್ಲಿ ಎಂಟಿಒಕ್ಸಿಡೆಂಟ್ಗಳು ಮತ್ತು ಕ್ಯಾಲ್ಸಿಯಂ ಕೂಡ ಹೇರಳವಾಗಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಕಡಲೆಕಾಯಿಯಲ್ಲಿರುವ ಕ್ಯಾಲ್ಸಿಯಂ ದೇಹದ ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸುತ್ತದೆ.ಕಡಲೆಕಾಯಿಯು ಮಹಿಳೆಯರಲ್ಲಿ ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂಬುದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಕಡಲೆಕಾಯಿಯನ್ನು ಕಡಿಮೆ ಗ್ಲೈಸೆಮಿಕ್ ಆಹಾರದ ವರ್ಗದಲ್ಲಿ ಸೇರಿಸಲಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಬಲ್ಲದು. ದೇಹದಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಮಟ್ಟವನ್ನು ಕಡಲೆಕಾಯಿ ನಿಯಂತ್ರಿಸುತ್ತದೆ. ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ.
ಕಡಲೆಕಾಯಿ ಸೇವನೆಯಿಂದ ದೇಹದ ದೌರ್ಬಲ್ಯ ಮಾಯವಾಗಿ, ಶಕ್ತಿ ತುಂಬಿಕೊಳ್ಳುತ್ತದೆ. ಸ್ವಲ್ಪ ಕಡಲೆಕಾಯಿಯನ್ನು ರಾತ್ರಿ ಮಲಗುವ ಮುನ್ನ ನೀರಿನಲ್ಲಿ ನೆನೆಸಿಡಿ. ಅದನ್ನು ನೀವು ಹಾಗೇ ತಿನ್ನಬಹುದು, ಅಥವಾ ಉಪಹಾರದ ಜೊತೆ ಸೇವನೆ ಮಾಡಬಹುದು. ಕಡಲೆಕಾಯಿಯನ್ನು ರಾತ್ರಿ ಸೇವನೆ ಮಾಡಬಾರದು. ಏಕೆಂದರೆ ಇದು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.