ವಿಧಾನಸಭಾ ಚುನಾವಣೆಗೆ ಇನ್ನೂ ಕೆಲ ತಿಂಗಳಿರುವ ಮಧ್ಯೆಯೇ ಮುಖ್ಯಮಂತ್ರಿ ಹುದ್ದೆ ಸಾಲಿನಲ್ಲಿ ಹಲವರಿದ್ದಾರೆ. ಕಾಂಗ್ರೆಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರನ್ನು ಈ ಹುದ್ದೆಗೆ ಕೆಲವರು ಪ್ರಸ್ತಾಪಿಸಿದ ವೇಳೆ ಹೈಕಮಾಂಡ್ ಇದಕ್ಕೆ ಕಡಿವಾಣ ಹಾಕಿತ್ತು.
ಹೀಗಾಗಿ ಈಗ ಇವರಿಬ್ಬರ ಹೆಸರು ಸದ್ಯಕ್ಕೆ ಬಹಿರಂಗವಾಗಿ ಕೇಳಿ ಬರುತ್ತಿಲ್ಲವಾದರೂ ಇದೀಗ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮುಖ್ಯಮಂತ್ರಿ ಹುದ್ದೆಗೇರಲು ನನಗೂ ಅರ್ಹತೆ ಇದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಅವರ ಹೆಸರನ್ನು ಈ ಹುದ್ದೆಗೆ ಪ್ರಸ್ತಾಪಿಸುತ್ತಿದ್ದ ಜಮೀರ್ ಅಹ್ಮದ್, ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಅಲ್ಪಸಂಖ್ಯಾತರಿಗೆ ಮುಖ್ಯಮಂತ್ರಿ ಹುದ್ದೆ ನೀಡಲು ಸಾಧ್ಯ. ನಾನು ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ ಹೀಗಾಗಿ ನಾನು ಸಹ ಮುಖ್ಯಮಂತ್ರಿ ಹುದ್ದೆಗೆ ಅರ್ಹನಿದ್ದೇನೆ ಎಂದಿದ್ದಾರೆ.