ಉಡುಪಿ: ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಸಲು ಕುಸುಮ್ ಯೋಜನೆ ಜಾರಿಗೊಳಿಸಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಘೋಷಿಸಿದ್ದಾರೆ.
ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ ಉಚಿತವಾಗಿ ಸೌರ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ಕುಸುಮ್ ಯೋಜನೆ ಜಾರಿಗೊಳಿಸಲಾಗುವುದು. ಕೇಂದ್ರ ಸರ್ಕಾರದ ಸಹಾಯದೊಂದಿಗೆ ಈ ಯೋಜನೆ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಒಂದು ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯದ 1000 ಸೋಲಾರ್ ಫೀಡರ್ ಗಳನ್ನು ಸ್ಥಾಪನೆ ಮಾಡಲಿದ್ದು, ಅವುಗಳಿಂದ ನೇರವಾಗಿ ರೈತರ ಕೃಷಿ ಪಂಪ್ಸೆಟ್ ಗಳಿಗೆ ಉಚಿತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು. 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕೆಂಬ ರೈತರ ಬೇಡಿಕೆ ಈಡೇರಲಿದೆ ಎಂದು ತಿಳಿಸಿದ್ದಾರೆ.