ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ.ವಿ.ಸೋಮಣ್ಣ, ನಾನು ಮಹಿಳೆಗೆ ಹೊಡೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, ನಿನ್ನೆ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರ ಕೂಡ ನಡೆದಿಲ್ಲ. ನಾನು ಮಹಿಳೆ ಮೇಲೆ ಕೈ ಮಾಡಿಲ್ಲ. ಮಹಿಳೆ ಪದೇ ಪದೇ ವೇದಿಕೆ ಮೇಲೆ ಬರುತ್ತಿದ್ದಳು. ತಾಯಿ ಎಷ್ಟು ಸಾರಿ ಬರ್ತೀಯ? ನಿನ್ನ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಹೇಳಿ ಮಹಿಳೆಯನ್ನು ಪಕ್ಕಕ್ಕೆ ಸರಿಸಿದೆ ಅಷ್ಟೇ ಎಂದು ಹೇಳಿದ್ದಾರೆ.
ಇದರಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ. ನನಗೆ ಮಹಿಳೆಯರ ಬಗ್ಗೆ ಅಪಾರ ಗೌರವ, ಮರುಕವಿದೆ. ನಾನು ಮಹಿಳೆಯನ್ನು ಹೊಡೆದಿಲ್ಲ, ಅಂತಹ ಘಟನೆಯೂ ನಡೆದಿಲ್ಲ ಎಂದು ತಿಳಿಸಿದ್ದಾರೆ.