ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದವರಿಗೆ ದೀಪಾವಳಿ ಹಬ್ಬದ ಕೊಡುಗೆ ನೀಡಲಾಗಿದೆ.
ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಮೀಸಲಾತಿ ಹೆಚ್ಚಳದ ಬಗ್ಗೆ ನ್ಯಾ. ನಾಗಮೋಹನದಾಸ್ ಸಮಿತಿ ನೀಡಿದ್ದ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಒಪ್ಪಿಕೊಂಡು ಮೀಸಲಾತಿ ಹೆಚ್ಚಳ ಜಾರಿಗೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇಂದಿನಿಂದಲೇ ರಾಜ್ಯದ ಪರಿಶಿಷ್ಟ ಜಾತಿ ಪಂಗಡದವರಿಗೆ ಮೀಸಲಾತಿ ಹೆಚ್ಚಳವಾಗಲಿದೆ,
ಪರಿಶಿಷ್ಟ ಜಾತಿ ಮೀಸಲಾತಿ ಶೇಕಡ 15 ರಿಂದ ಶೇಕಡ 17 ರಷ್ಟು, ಪರಿಶಿಷ್ಟ ಪಂಗಡದ ಮೀಸಲಾತಿ ಶೇಕಡ 3ರಿಂದ ಶೇಕಡ 7ರಷ್ಟು ಹೆಚ್ಚಳವಾಗಲಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸಿಗಲಿದೆ. ಈ ಮೂಲಕ ಸಿಎಂ ದೀಪಾವಳಿ ಕೊಡುಗೆ ನೀಡಿದ್ದಾರೆ.