ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಡಗರ-ಸಂಭ್ರಮ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ ಪಟಾಕಿ ಹಚ್ಚಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ.
ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಟಾಕಿ ಸಿಡಿಸಲು ಸಮಯ ನಿಗದಿ ಮಾಡಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ.
ಅಕ್ಟೋಬರ್ 24 ಮತ್ತು 26ರವರೆಗೆ ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ದಿನದ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಸುಪ್ರೀಂ ಕೋರ್ಟ್ ನಿಯಮಾವಳಿ ಕಡ್ಡಾಯ ಪಾಲನೆ ಮಾಡಬೇಕು. 125 ಡೆಸಿಬೆಲ್ ಗಿಂತ ಕಡಿಮೆ ಇರುವ ಪಟಾಕಿ ಬಳಸಬೇಕು. ಪಟಾಕಿ ಮಾರುವವರಿಗೆ ತ್ಯಾಜ್ಯ ವಿಲೇವಾರಿ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಆದೇಶಿಸಲಾಗಿದೆ.