ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಆಯನೂರು ಸಮೀಪ ನಡೆದಿದೆ.
ಆಯನೂರಿನ ಯಶ್ವಂತ್ ಸಾವನ್ನಪ್ಪಿದ ಯುವಕನಾಗಿದ್ದು, ಈತ ಸ್ನೇಹಿತನ ಜೊತೆ ಶಿವಮೊಗ್ಗಕ್ಕೆ ಹೋಗುತ್ತಿರುವಾಗ ಕದಂಬ ಹೋಟೆಲ್ ಬಳಿ ಲಾರಿ ಡಿಕ್ಕಿ ಹೊಡೆದಿದೆ.
ಇದರ ಪರಿಣಾಮ ಯಶ್ವಂತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಗಾಯಗೊಂಡಿರುವ ಮತ್ತೋರ್ವ ಯುವಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.