ಶಿವಮೊಗ್ಗ ನಗರದಲ್ಲಿ ತಡರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ವೆಂಕಟೇಶ ನಗರದಲ್ಲಿ ಚಾಕುವಿನಿಂದ ಇರಿದು ವಿಜಯ್(37) ಎಂಬುವನನ್ನು ಹತ್ಯೆ ಮಾಡಲಾಗಿದೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಿಜಯನ್ ನ್ನು ಹತ್ಯೆ ಮಾಡಲಾಗಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ವರದಿಯಾಗಿದೆ.
ಘಟನಾ ಸ್ಥಳದ ಬಳಿ ಸಿಸಿ ಟಿವಿ ಫೂಟೇಜ್ ಸಿಕ್ಕಿದೆ. ಅವರಿಗೆ ಗೊತ್ತಿರುವ ವ್ಯಕ್ತಿಗಳೇ ಈ ಕೃತ್ಯ ಎಸಗಿರುವಂತೆ ತೋರುತ್ತಿದೆ. ವೈಯಕ್ತಿಕ ಕಾರಣದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.