ಶಿವಮೊಗ್ಗ: ಶಿವಮೊಗ್ಗದಲ್ಲಿ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಗೊಂದಲ ಉಂಟಾಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಸಲ್ಮಾನ್ ಗೂಂಡಾಗಳಿಗೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಸಾವರ್ಕರ್ ಅವರ ಮೊಮ್ಮಗ ಎಲ್ಲೂ ಪ್ರಚೋದನಾಕಾರಿ ಭಾಷಣ ಮಾಡಿಲ್ಲ. ಶಿವಮೊಗ್ಗದಲ್ಲಿ ಪ್ರಕಾಶ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾರೆ. ಪಿಎಫ್ಐ ಇದೆ ಎಂದು ತೋರಿಸಲು ಹೊರಟಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಇಂತಹ ದುಷ್ಕರ್ಮಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಕೆಲವರು ಶಿವಮೊಗ್ಗದಲ್ಲಿ ಶಾಂತಿ ಕಡಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.