ಹರಿ ಹರೀಶ್ ನಿರ್ದೇಶನದ ಸಮಂತಾ ರುತ್ ಪ್ರಭು ಅಭಿನಯದ ಪಾನ್ ಇಂಡಿಯಾ ಸಿನಿಮಾ ʼಯಶೋದಾʼ ಇದೇ ನವೆಂಬರ್ 11ರಂದು ವಿಶ್ವಾದ್ಯಂತ ತೆರೆ ಮೇಲೆ ಬರಲಿದ್ದು ,ನಾಳೆ ಈ ಚಿತ್ರದ ಟ್ರೈಲರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ.
ಈ ಚಿತ್ರದ ಟ್ರೈಲರ್ 5 ಭಾಷೆಗಳಲ್ಲಿ ರಿಲೀಸ್ ಆಗಲಿದ್ದು ಕನ್ನಡ ವರ್ಷನ್ ಅನ್ನು ರಕ್ಷಿತ್ ಶೆಟ್ಟಿ ಲಾಂಚ್ ಮಾಡಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಸಮಂತಾ ರುತ್ ಪ್ರಭು ಸೇರಿದಂತೆ ಉನ್ನಿ ಮುಕುಂದನ್, ವರಲಕ್ಷ್ಮಿ ಶರತ್ ಕುಮಾರ್, ಸಂಪತ್ ರಾಜ್, ದಿವ್ಯ ಶ್ರೀಪಾದ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.
ಶ್ರೀದೇವಿ ಮೂವೀಸ್ ಬ್ಯಾನರ್ ನಡಿ ಶಿವಲೆಂಕ ಕೃಷ್ಣ ಪ್ರಸಾದ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಮಣಿಶರ್ಮ ಸಂಗೀತ ಸಂಯೋಜನೆ ನೀಡಿದ್ದಾರೆ.