alex Certify BIG NEWS: ಸರ್ಕಾರಿ ಬಸ್ ಭೀಕರ ಅಪಘಾತ; 25 ಪ್ರಯಾಣಿಕರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ಬಸ್ ಭೀಕರ ಅಪಘಾತ; 25 ಪ್ರಯಾಣಿಕರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ 25 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಲೆಮಹದೇಶ್ವರ ಬೆಟ್ಟದ ತಾಳಬೆಟ್ಟದ ಬಳಿ ನಡೆದಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ತಾಳಬೆಟ್ಟದ ಬಳಿ ಹೋಗುತ್ತಿದ್ದಾಗ ಬಸ್, ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಹಳ್ಳಕ್ಕೆ ನುಗ್ಗಿದೆ. ಅಪಘಾತದಲ್ಲಿ 25 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೊಳ್ಳೆಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯ ಜಿಲ್ಲೆ ಮದ್ದೂರು ಡಿಪೋಗೆ ಸೇರಿದ ಬಸ್ ಇದಾಗಿದೆ. ಮಲೆಮಹದೇಶ್ವರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನದೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...