ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಅಧಿಕಾರ ವಹಿಸಿಕೊಂಡಿದ್ದು, ಅಧ್ಯಕ್ಷರಾದ ಬೆನ್ನಲ್ಲೇ ಪಕ್ಷದ ಉನ್ನತ ಮಟ್ಟದ ಸಭೆ ನಡೆಸಿ ಮಹತ್ತರ ಬದಲಾವಣೆ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಸ್ಟೀರಿಂಗ್ ಸಮಿತಿ ರಚಿಸಿದ್ದಾರೆ. ಇದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಮಿತಿಯ ಸದಸ್ಯರಾಗಿದ್ದಾರೆ.
ಕಾರ್ಯಕಾರಿ ಸಮಿತಿಯ ಬದಲಿಗೆ ಸ್ಟೀರಿಂಗ್ ಕಮಿಟಿ ರಚಿಸಿದ್ದು, ಹೊಸದಾಗಿ ರಚಿಸಿರುವ 47 ಸದಸ್ಯರ ಈ ಸಮಿತಿಯಲ್ಲಿ ರಾಜ್ಯದ ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ ಮತ್ತು ದಿನೇಶ್ ಗುಂಡೂರಾವ್, ಜೈರಾಂ ರಮೇಶ್ ಅವರಿಗೆ ಸ್ಥಾನ ನೀಡಲಾಗಿದೆ.
ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಡಾ. ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಎ.ಕೆ. ಆಂಟನಿ, ಅಜಯ್ ಮಾಕೆನ್, ಅಂಬಿಕಾ ಸೋನಿ, ಆನಂದ್ ಶರ್ಮಾ, ಜೈರಾಮ್ ರಮೇಶ್, ಹರೀಶ್ ರಾವತ್, ಜಿತೇಂದ್ರ ಸಿಂಗ್, ಕುಮಾರಿ ಸೆಲ್ಜಾ, ಕೆ.ಸಿ. ವೇಣುಗೋಪಾಲ್, ಮುಕುಲ್ ವಾಸ್ನಿಕ್, ಓಮ್ಮನ್ ಚಾಂಡಿ, ಪ್ರಿಯಾಂಕಾ ಗಾಂಧಿ ವಾದ್ರಾ, ಪಿ. ಚಿದಂಬರಂ, ರಣದೀಪ್ ಸುರ್ಜೇವಾಲಾ, ಅಧೀರ್ ರಂಜನ್ ಚೌಧರಿ, ದಿಗ್ವಿಜಯ್ ಸಿಂಗ್, ದಿನೇಶ್ ಗುಂಡೂರಾವ್, ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ, ಮೀರಾ ಕುಮಾರ್ ಸೇರಿದಂತೆ 47 ಜನರಿದ್ದಾರೆ.