ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 5500 ರೂ. ದರ ನಿಗದಿ ಮಾಡಬೇಕೆಂದು ಒತ್ತಾಯಿಸಿ ಇಂದು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಬಂದು ಮಾಡಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೆದ್ದಾರಿಗಳನ್ನು ಬಂದ್ ಮಾಡಲಾಗುವುದು. ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳದ ಹಿನ್ನೆಲೆಯಲ್ಲಿ ಧರಣಿ ನಡೆಸಲಾಗುವುದು. ರಾಜ್ಯದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಧರಣಿ ನಡೆಸಲಿದ್ದಾರೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅ. 31 ರಂದು ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.