alex Certify BIG NEWS: ಮನೆ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ್ದ ವ್ಯಕ್ತಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮನೆ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ್ದ ವ್ಯಕ್ತಿ ಅರೆಸ್ಟ್

ವ್ಯಕ್ತಿಯೊಬ್ಬ ತನ್ನ ಮನೆಯ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ್ದು, ಸ್ಥಳೀಯರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇಂಥದೊಂದು ಘಟನೆ ಚತ್ತೀಸ್ಗಡದಲ್ಲಿ ನಡೆದಿದೆ.

ಸಾರಾನಗರ್ ಬಿಲಾಯ್ಗರ್ ಜಿಲ್ಲೆಯ ಅಟಲ್ ಚೌಕ ಏರಿಯಾದ ಸರಿಯಾ ಪಟ್ಟಣದಲ್ಲಿ 52 ವರ್ಷದ ಮುಸ್ತಾಕ್ ಖಾನ್ ಎಂಬಾತ ತನ್ನ ಮನೆಯ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ್ದ.

ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಮಂಗಳವಾರ ಸಂಜೆ ಆತನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಸೆಕ್ಷನ್ 153ಎ ಅಡಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...