ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಕೆ ರಾಮ್ ನಾರಾಯಣ್ ನಿರ್ದೇಶನದ ‘ಅಬ್ಬರ’ ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಈಗಾಗಲೇ ಘೋಷಣೆ ಮಾಡಿದ್ದು, ಇದೀಗ ”ನಾನು ನೀನು” ಎಂಬ ರೊಮ್ಯಾಂಟಿಕ್ ವೀಡಿಯೋ ಹಾಡೊಂದನ್ನು ಇಂದು ರಾತ್ರಿ 7ಗಂಟೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಸಂತೋಷ್ ವೆಂಕಿ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದು, ಸಿ& ಎಂ ಮೂವೀಸ್ ಬ್ಯಾನರ್ ನಡಿ ಬಸವರಾಜ್ ಮಂಚಯ್ಯ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಪ್ರಜ್ವಲ್ ದೇವರಾಜ್ ಗೆ ಜೋಡಿಯಾಗಿ ರಾಜಶ್ರೀ ಪೊನ್ನಪ್ಪ ನಾಯಕಿಯಾಗಿ ಅಭಿನಯಿಸಿದ್ದು, ಲೇಖಾ ಚಂದ್ರ, ರವಿಶಂಕರ್, ನಿಮಿಕಾ ರತ್ನಾಕರ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.