alex Certify BIG NEWS: ಕಲುಷಿತ ನೀರಿಗೆ ಮತ್ತೊಬ್ಬರು ಬಲಿ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲುಷಿತ ನೀರಿಗೆ ಮತ್ತೊಬ್ಬರು ಬಲಿ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಬೆಳಗಾವಿ: ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಮತ್ತೊಬ್ಬರು ಬಲಿಯಾಗಿದ್ದಾರೆ.

ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಸರಸ್ವತಿ ನಿಂಗಪ್ಪ ಹಾವಳ್ಳಿ (70) ಎಂಬ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ತಾಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ನಿನ್ನೆ 70 ವರ್ಷದ ಶಿವಪ್ಪ ಬೆಳ್ಳೇರಿ ಎಂಬುವವರು ಮೃತಪಟ್ಟಿದ್ದರು.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇದುವರೆಗೂ 94 ಜನರು ಅಸ್ವಸ್ಥರಾಗಿದ್ದು, ಅಸ್ವಸ್ಥರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಜನರು ಕುಡಿಯುವ ನೀರಿನಿಂದ ಸಾವನ್ನಪ್ಪುತ್ತಿದ್ದರೂ ಈವರೆಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆಗಲಿ, ತಹಶೀಲ್ದಾರ್ ಗಳಾಗಲಿ, ಯಾವೊಬ್ಬ ಅಧಿಕಾರಿಯೂ ಗ್ರಾಮಕ್ಕೆ ಆಗಮಿಸಿಲ್ಲ. ಜನರ ಸಂಕಷ್ಟ, ಸಮಸ್ಯೆ ಆಲಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...