ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನ ಜೆಪಿ ಭವನದಲ್ಲಿ ಆರಂಭವಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಮಹತ್ವದ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ, ಕರ್ನಾಟಕ ವಿಧಾನಸಭೆ ಚುನಾವಣೆ ಪಕ್ಷ ಸಂಘಟನೆಯ ಕುರಿತಾಗಿ ಚರ್ಚೆ ನಡೆಸಲಾಗಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು ಮುಂದುವರೆಯುವ ಸಾಧ್ಯತೆ ಇದೆ. ಕರ್ನಾಟಕ, ಕೇರಳ, ಬಿಹಾರ ಹಾಗೂ ಆಂಧ್ರ ಪ್ರದೇಶ ಸೇರಿ 12 ರಾಜ್ಯಗಳ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು, ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ.