alex Certify ರಾಜ್ಯದಲ್ಲಿ 200 ಅರೇಬಿಕ್​ ಶಾಲೆ: ಸ್ಥಿತಿಗತಿಗಳ ಮಾಹಿತಿ ನೀಡುವಂತೆ ಶಿಕ್ಷಣ ಸಚಿವ ನಾಗೇಶ್​ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ 200 ಅರೇಬಿಕ್​ ಶಾಲೆ: ಸ್ಥಿತಿಗತಿಗಳ ಮಾಹಿತಿ ನೀಡುವಂತೆ ಶಿಕ್ಷಣ ಸಚಿವ ನಾಗೇಶ್​ ಸೂಚನೆ

ಮಡಿಕೇರಿ: ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಬೇರೆ ಶಾಲೆಗಳ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 200 ಅರೇಬಿಕ್ ಶಾಲೆಗಳ ಸ್ಥಿತಿಗತಿ ಹಾಗೂ ಕಾರ್ಯನಿರ್ವಹಣೆ ಕುರಿತು ಶೀಘ್ರ ವರದಿ ಸಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ. ಮಡಿಕೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ‘ಅರೇಬಿಕ್ ಶಾಲೆಗಳನ್ನು ನಿಯಮಗಳಿಗೆ ಅನುಸಾರವಾಗಿ ನಡೆಸುತ್ತಿಲ್ಲ. ಭಾಷೆ ಮತ್ತು ವಿಜ್ಞಾನದ ಕಲಿಕೆಯೂ ಸಮರ್ಪಕ ರೀತಿಯಲ್ಲಿ ಇಲ್ಲ. ಈ ಬಗ್ಗೆ ಹಲವರು ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಮಗ್ರವಾಗಿ ಪರಿಶೀಲಿಸುವಂತೆ ಆಯುಕ್ತರಿಗೆ ಸೂಚಿಸಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ 106 ಅನುದಾನಿತ ಅರೇಬಿಕ್ ಶಾಲೆಗಳು ಇವೆ. 80 ಅನುದಾನ ರಹಿತ ಶಾಲೆಗಳಿವೆ. ಇಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದ ಅನುಸಾರ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಹೀಗಾಗಿ, ಈ ಕುರಿತು ಪರಿಶೀಲಿಸಲಾಗುತ್ತಿದೆ ಎಂದ ಸಚಿವರು, ಬೇರೆ ಅನುದಾನಿತ ಶಾಲೆಗಳ ರೀತಿಯಲ್ಲಿ ಅರೇಬಿಕ್ ಶಾಲೆಗಳು ಶಿಕ್ಷಣ ನೀಡಬೇಕು. ಆದರೆ, ಬಹಳಷ್ಟು ಶಾಲೆಗಳಲ್ಲಿ ಭಾಷೆ ಮತ್ತು ವಿಜ್ಞಾನದ ಕಲಿಕೆ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅರೇಬಿಕ್ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ದಾಖಲಾಗುತ್ತಾರೆ. ದಾಖಲೆಗಳಲ್ಲಿ ಕಾಣಿಸುವ ಈ ದಾಖಲಾತಿ ಸಂಖ್ಯೆಗೂ, ವಾಸ್ತವವಾಗಿ ಶಾಲೆಗಳಿಗೆ ಹಾಜರಾಗುವ ಮಕ್ಕಳ ಸಂಖ್ಯೆಗೂ ಭಾರೀ ವ್ಯತ್ಯಾಸವಿದೆ. ಶಿಕ್ಷಣವು ಎಲ್ಲ ಮಕ್ಕಳ ಹಕ್ಕಾಗಿದೆ. ಧರ್ಮದ ಕಾರಣಕ್ಕೆ ಯಾವುದೇ ಮಗು ಉತ್ತಮ ಶಿಕ್ಷಣದಿಂದ ವಂಚಿತವಾಗಬಾರದು’ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...