ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಪ್ರತಿ ತಿಂಗಳು ಒಂದನೇ ತಾರೀಖಿನಂದೇ ವೇತನ ನೀಡುವ ಕುರಿತಂತೆ ಇತ್ತೀಚೆಗಷ್ಟೇ ಮಹತ್ವದ ತೀರ್ಮಾನ ಕೈಗೊಂಡಿದ್ದ ನಿಗಮ ಈಗ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದೆ.
ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಆರನೇ ವೇತನ ಆಯೋಗ ನೀಡುವ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಜೊತೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಶುಕ್ರವಾರದಂದು ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿ ನಾಲ್ಕರಿಂದ ಐದು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಆಗಬೇಕು. ಆದರೆ ಬೇರೆ ಬೇರೆ ಕಾರಣಗಳಿಂದ ಇದು ಸಾಧ್ಯವಾಗಿಲ್ಲ, ಹೀಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರದಲ್ಲಿ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿದ್ದಾರೆ.