alex Certify BIG NEWS: ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣ; 4ನೇ ಆರೋಪಿ ವಶಕ್ಕೆ ಪಡೆದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣ; 4ನೇ ಆರೋಪಿ ವಶಕ್ಕೆ ಪಡೆದ ಪೊಲೀಸರು

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ನಾಲ್ಕನೇ ಆರೋಪಿ ಮಠದ ಕಾರ್ಯದರ್ಶಿಯನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಜಿಲ್ಲಾಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಟೆಸ್ಟ್ ಗೆ ಒಳಪಡಿಸಿದ್ದಾರೆ.

ಮುರುಘಾ ಶ್ರೀ ವಿರುದ್ಧ ಆ.26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮೊದಲ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಪ್ರಕರಣ ವರ್ಗಾವಣೆಯಾಗಿತ್ತು. ಸೆ.1ರಂದು ಚಿತ್ರದುರ್ಗ ಪೊಲೀಸರು ಮುರುಘಾ ಶ್ರೀಗಳನ್ನು ಬಂಧಿಸಿದ್ದರು. ಇದೀಗ ಪ್ರಕರಣದ ನಾಲ್ಕನೇ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...