ಬೆಂಗಳೂರು: ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ಹೋಗಿದೆ ಎಂಬ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಹೇಳಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಪಕ್ಷ ಸುಳ್ಳನ್ನೇ ಸೃಷ್ಟಿ ಮಾಡುವ ಕೆಲಸ ಮಾಡುತ್ತಾ ಬಂದಿದೆ. ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಹೇಳಿಲ್ಲ. ಇದು ಕಾಂಗ್ರೆಸ್ ಟೂಲ್ ಕಿಟ್ ನ ಮುಂದುವರಿದ ಭಾಗ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಐಫೋನ್, ಚಿನ್ನದ ನಾಣ್ಯ ನೀಡಿದ್ದರು. ಈಗ ನಮ್ಮ ವಿರುದ್ಧ ಆರೋಪ ಮಾಡಲು ಕಾಂಗ್ರೆಸ್ ಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದರು. ಪತ್ರಕರ್ತರಿಗೆ ಹಣ ನೀಡಿದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.