ಬೆಂಗಳೂರು: ಕೆ.ಆರ್.ಪುರ ಇನ್ಸ್ ಪೆಕ್ಟರ್ ನಂದೀಶ್ ಪ್ರಕರಣದ ಬಗ್ಗೆ ತನಿಖೆಗೆ ಸೂಚಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಅಮಾನತುಗೊಂಡಿದ್ದ ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿದ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸಚಿವ ಎಂಟಿಬಿ ನಾಗರಾಜ್ ನಂದೀಶ್ 70-80 ಲಕ್ಷ ಹಣಕೊಟ್ಟು ಬಂದಿದ್ದಾಗಿ ಹೇಳಿಕೆ ನೀಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ನಂದೀಶ್ ಸಾವು ಪ್ರಕರಣ ತನಿಖೆ ನಡೆಸಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಡಿಜಿ ಊರಿನಲ್ಲಿ ಇರಲಿಲ್ಲ, ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಯನ್ನು ಪಡೆದು ಇಂದು ಪೊಲೀಸ್ ಮಹಾ ನಿರ್ದೇಶಕರಿಗೆ ತನಿಖೆ ನಡೆಸುವಂತೆ ಸೂಚನೆ ನೀಡುತ್ತೇನೆ ಎಂದರು.
ಮಾಹಿತಿಗಳನ್ನು ಪಡೆದು ಏನಾದರೂ ಅಂಶಗಳಿದ್ದರೆ ತನಿಖೆಗೆ ಸೂಚಿಸುತ್ತೇನೆ. ಇದರಲ್ಲಿ ಹಿಂದೆ ಮುಂದೆ ನೋಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.