alex Certify ಪೊಲೀಸ್ ದಂಪತಿಗೆ ಗುಡ್ ನ್ಯೂಸ್; ಒಂದೇ ಕಡೆ ಕೆಲಸ ಮಾಡಲು ಸರ್ಕಾರದ ಸಮ್ಮತಿ ನಿರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ದಂಪತಿಗೆ ಗುಡ್ ನ್ಯೂಸ್; ಒಂದೇ ಕಡೆ ಕೆಲಸ ಮಾಡಲು ಸರ್ಕಾರದ ಸಮ್ಮತಿ ನಿರೀಕ್ಷೆ

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ದಂಪತಿಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಪತಿ – ಪತ್ನಿ ಒಂದೇ ಕಡೆ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡುವುದಕ್ಕೆ ಸರ್ಕಾರ ಸಮ್ಮತಿ ನೀಡುವ ನಿರೀಕ್ಷೆ ಇದೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಬೆಂಗಳೂರಿನಲ್ಲಿ ಈ ವಿಷಯ ತಿಳಿಸಿದ್ದು, ಪತಿ-ಪತ್ನಿ ಪೊಲೀಸ್ ಇಲಾಖೆಯಲ್ಲಿದ್ದರೆ ಅಂತವರು ಒಂದೇ ಠಾಣೆ ಅಥವಾ ಘಟಕದಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಇದಕ್ಕೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಶೀಘ್ರದಲ್ಲೇ ಇದಕ್ಕೆ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ ಎಂದಿದ್ದಾರೆ. ಈ ಹಿಂದೆ ಪತಿ-ಪತ್ನಿ ಒಂದೇ ಕಡೆ ಕೆಲಸ ಮಾಡುವ ಅವಕಾಶವಿತ್ತಾದರೂ ಬಳಿಕ ನಾನಾ ಕಾರಣಗಳಿಂದ ಇದು ಸ್ಥಗಿತವಾಗಿತ್ತು. ಈ ಪದ್ಧತಿಯನ್ನು ಮತ್ತೆ ಆರಂಭಿಸುವ ನಿರೀಕ್ಷೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...