ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಅದ್ದೂರಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆದಿದ್ದು, ಇದರಲ್ಲಿ ಪಾಲ್ಗೊಳ್ಳುವವರಿಗೆ ಹೋಳಿಗೆ ಊಟ ಬಡಿಸಲಾಗುತ್ತದೆ.
ಹುಕ್ಕೇರಿ ಹಿರೇಮಠದ ವತಿಯಿಂದ ಹೋಳಿಗೆ ಊಟ ಬಡಿಸುವ ವ್ಯವಸ್ಥೆ ಮಾಡಲಾಗಿದ್ದು, ಒಬ್ಬರಿಗೆ ತಲಾ ಎರಡು ಹೋಳಿಗೆಗಳಂತೆ 50,000 ಮಂದಿಗೆ ಒಟ್ಟು ಒಂದು ಲಕ್ಷ ಹೋಳಿಗೆಗಳನ್ನು ಸಿದ್ಧಪಡಿಸಲಾಗಿದೆ.
ಹಿರಿಯ ನಟ ಸಾಯಿ ಕುಮಾರ್ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಇದಕ್ಕೆ ಚಾಲನೆ ನೀಡಲಿದ್ದಾರೆ.
ಹೋಳಿಗೆ ಜೊತೆಗೆ ಬದನೆಕಾಯಿ ಪಲ್ಯ, ಅನ್ನ ಸಾಂಬಾರ್ ಬಡಿಸಲಾಗುತ್ತಿದ್ದು, ಒಂದು ಗಂಟೆಯಿಂದಲೇ ದಾಸೋಹ ಆರಂಭವಾಗಲಿದೆ. ಸುಮಾರು 200 ಮಂದಿ ಬಾಣಸಿಗರು ಅಡುಗೆ ತಯಾರಿ ನಡೆಸಿದ್ದಾರೆ.