ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಮುಂದಿನ ಎರಡು ವರ್ಷಗಳಲ್ಲಿ ಇವುಗಳನ್ನು ಸಂಪೂರ್ಣ ಭರ್ತಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ಈ ವರ್ಷ ಒಂದು ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅಲ್ಲದೆ ಎಲ್ಲ ರಂಗಗಳಲ್ಲಿಯೂ ಕನ್ನಡ ಭಾಷೆ ಕಡ್ಡಾಯವಾಗಿ ಬಳಕೆ ಮಾಡುವ ಸಲುವಾಗಿ ಕಾನೂನು ರೂಪಿಸಲಾಗುತ್ತದೆ ಎಂದು ತಿಳಿಸಿದರು.
ಕನ್ನಡ ಕಡ್ಡಾಯಗೊಳಿಸುವ ಕುರಿತಂತೆ ಡಿಸೆಂಬರ್ ನಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನದಲ್ಲಿ ಕಾನೂನು ರೂಪಿಸಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆಯಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.