ಜೀವ ಬೆದರಿಕೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಈಗಾಗಲೇ ಭದ್ರತೆಯನ್ನು ನೀಡಲಾಗಿದ್ದು, ಇದೀಗ ಅದನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ.
ಸಲ್ಮಾನ್ ಖಾನ್ ಅವರಿಗೆ ಇದುವರೆಗೆ ಎಕ್ಸ್ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿದ್ದು, ಇದೀಗ ಮಹಾರಾಷ್ಟ್ರ ಸರ್ಕಾರ ಇದನ್ನು ವೈ ಪ್ಲಸ್ ಶ್ರೇಣಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರಿಗೆ ಕರೆ ಮಾಡಿದ್ದ ಅಪರಿಚಿತರು ನಿಮ್ಮ ಪುತ್ರನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದರು. ಈ ಹಿನ್ನೆಲೆಯಲ್ಲಿ ಸಲೀಂ ಖಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.