ನವೆಂಬರ್ 11ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿರುವ ‘ದಿಲ್ ಪಸಂದ್’ ಚಿತ್ರದ ಟ್ರೈಲರ್ ಇಂದು ಅನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು, ಮೇಘನಾ ಶೆಟ್ಟಿ ಸೇರಿದಂತೆ ಅಜಯ್ ರಾವ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಸಿನಿಮಾದಲ್ಲಿ ಸಾಧು ಕೋಕಿಲ, ತಬಲಾ ನಾಣಿ, ಅರುಣಾ ಬಾಲರಾಜ್, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾ ಬಳಗವಿದೆ.
ರಶ್ಮಿ ಫಿಲ್ಮ್ಸ್ ಬ್ಯಾನರ್ ನಡಿ ಸುಮಂತ್ ಕ್ರಾಂತಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು ಶಿವ ತೇಜಸ್ ನಿರ್ದೇಶಿಸಿದ್ದಾರೆ, ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.
ಇದೊಂದು ರೊಮ್ಯಾಂಟಿಕ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.