alex Certify BIG NEWS: ಡಿಕೆಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ; EDಗೆ ನೋಟಿಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಕೆಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ; EDಗೆ ನೋಟಿಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ದೆಹಲಿ ಹೈಕೋರ್ಟ್ ಗೆ ಅಗ್ನಿಪಥ್ ಅರ್ಜಿ ವಿಚಾರಣೆ ಹೊಣೆ - Vishwavani Kannada Daily

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟೀಸ್ ಜಾರಿ ಮಾಡಿದೆ.

ತನ್ನ ವಿರುದ್ಧದ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವಂತೆ ಡಿ.ಕೆ.ಶಿವಕುಮಾರ್, ದೆಹಲಿ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಇಡಿಗೆ ನೋಟೀಸ್ ಜಾರಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಇಡಿ ಮುಂದೆ ವಿಚಾರಣೆಗೆ ಹಾಜರಾಗುವುದರಿಂದ ಡಿ.ಕೆ.ಶಿವಕುಮಾರ್ ವಿನಾಯಿತಿ ಕೇಳಿದ್ದರು. ಆದರೆ ಡಿಕೆಶಿ ಮನವಿಯನ್ನು ಇಡಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇದೇ ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್ ಇಡಿಗೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...