ಬೆಂಗಳೂರು: ಸಚಿವ ಎಂಟಿಬಿ ನಾಗರಾಜ್ ಅವರ ಬಾಮೈದನ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸಚಿವ ಎಂಟಿಬಿ ನಾಗರಾಜ್ ಬಾಮೈದ ಚಂದ್ರಶೇಖರ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಅವರ ಕಗ್ಗದಾಸಪುರದ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎರಡು ಇನ್ನೋವಾ ಕಾರಿನಲ್ಲಿ ಆಗಮಿಸಿರುವ 8 ಐಟಿ ಅಧಿಕಾರಿಗಳು ಚಂದ್ರಶೇಖರ್ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದೆ.