ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂಬ ಗೊಂದಲದಲ್ಲಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಆಪ್ತರು ಎರಡು ಕ್ಷೇತ್ರಗಳ ಸಮೀಕ್ಷೆ ನಡೆಸಿ ಸಿದ್ದರಾಮಯ್ಯ ಅವರಿಗೆ ವರದಿ ನೀಡಿದ್ದಾರೆ ಎನ್ನಲಾಗಿದೆ.
ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯ ಈ ಬಾರಿ ಬಾದಾಮಿ ಕ್ಷೇತ್ರ ಬಿಟ್ಟು ಕೋಲಾರ ಅಥವಾ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಆಪ್ತರು ಖಾಸಗಿ ಏಜೆನ್ಸಿ ಮೂಲಕ ಎರಡೂ ಕ್ಷೇತ್ರಗಳ ಸರ್ವೆ ನಡೆಸಿದ್ದರು. ವರದಿಯಲ್ಲಿ ಕೋಲಾರ ಸ್ಪರ್ಧೆ ವ್ಯಾಪಕ ಚರ್ಚೆ ನಡೆದಿದೆ ಎನ್ನಲಾಗಿದೆ.
ಇನ್ನು ಕ್ಷೇತ್ರ ಆಯ್ಕೆ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಕೋಲಾರ, ಚಿಕ್ಕಮಗಳೂರು, ವರುಣಾದಿಂದಲೂ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಲಾಗುತ್ತಿದೆ. ಅಂತಿಮವಾಗಿ ಪಕ್ಷ, ಜನರು ಏನು ಹೇಳುತ್ತಾರೆ ನೋಡೋಣ ಎಂದು ಹೇಳಿದ್ದಾರೆ.