ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿಯಲ್ಲಿ ಇಬ್ಬರು ಪುತ್ರಿಯರೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಿಪ್ಪಕ್ಕ(70), ಪುತ್ರಿಯರಾದ ಮಾರಕ್ಕ(50) ದ್ಯಾಮಕ್ಕ(40) ಆತ್ಮಹತ್ಯೆ ಮಾಡಿಕೊಂಡವರು. ಒಂದು ತಿಂಗಳ ಹಿಂದೆ ತಿಪ್ಪಕ್ಕನ ಮಗ ದ್ಯಾಮಣ್ಣ(45) ಅನಾರೋಗ್ಯದಿಂದ ಮೃತಪಟ್ಟಿದ್ದರು. ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ ತಿಪ್ಪಕ್ಕ ಇಬ್ಬರೂ ಪುತ್ರಿಯರೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಚಳ್ಳಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.