ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಫೋನ್ ಮೂಲಕ ಜೀವ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ವತಃ ಹುಕ್ಕೇರಿ ಪೊಲೀಸ್ ಠಾಣೆಗೆ ತೆರಳಿರುವ ಅವರು, ದೂರು ದಾಖಲಿಸಿದ್ದಾರೆ.
ನಾಲ್ಕು, ಐದು ಕರೆಗಳು ಬಂದಿವೆ ಎನ್ನಲಾಗಿದ್ದು, ಬೆದರಿಕೆ ಒಡ್ಡಿದವರು ಉರ್ದು ಮಿಶ್ರಿತ ಮಂಗಳೂರು ಕನ್ನಡ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ನಿನ್ನನ್ನು ಕೊಚ್ಚಿ ತುಂಡು ಮಾಡಿ ನಾಯಿಗೆ ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದ್ದು, ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮುತಾಲಿಕ್ ಇಂಥದಕ್ಕೆಲ್ಲ ನಾನು ಹೆದರುವುದಿಲ್ಲ. ಕಳೆದ 10 – 15 ವರ್ಷಗಳಿಂದ ಇಂತಹ ಕರೆಗಳು ಬರುತ್ತಲೇ ಇವೆ ಎಂದಿದ್ದಾರೆ.