ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಅಬ್ಬರ ಸಿನಿಮಾ ಹಾಡುಗಳ ಮೂಲಕ ಭರ್ಜರಿ ಸೌಂಡ್ ಮಾಡಿದ್ದು. ಈಗಾಗಲೇ ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಟೈಲರ್ ಅನ್ನು ನವೆಂಬರ್ 7ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.
ಕೆ ರಾಮ್ ನಾರಾಯಣ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಸಿ& ಎಮ್ ಮೂವೀಸ್ ಬ್ಯಾನರ್ ನಡಿ ಬಸವರಾಜ್ ಮಂಚಯ್ಯ ಬಂಡವಾಳ ಹೂಡಿದ್ದಾರೆ.
ಪ್ರಜ್ವಲ್ ದೇವರಾಜ್ ಸೇರಿದಂತೆ ರಾಜ್ ಶ್ರೀ ಪೊನ್ನಪ್ಪ, ರವಿಶಂಕರ್, ಲೇಖಾ ಚಂದ್ರ, ನಿಮಿಕಾ ರತ್ನಾಕರ್ ತೆರೆ ಹಂಚಿಕೊಂಡಿದ್ದಾರೆ. ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.