ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಪತ್ತೆಯಾಗಿರುವ ಅಪಾರ ಪ್ರಮಾಣದ ಹಣದ ಮೂಲದ ಬಗ್ಗೆ ತನಿಖೆ ನಡೆಸಿದ್ದಾರೆ.
ನಿನ್ನೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನಲ್ಲಿ 14 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 2,64,920 ರೂಪಾಯಿ ಹಾಗೂ ಆನೇಕಲ್ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 95,170 ರೂಪಾಯಿ ಪತ್ತೆಯಾಗಿತ್ತು. ಹೊಸಕೋಟೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 1,04,230 ರೂಪಾಯಿ ಹಣ ಪತ್ತೆಯಾಗಿತ್ತು. ದೊಡ್ಡಬಳ್ಳಾಪುರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 42,170 ರೂಪಾಯಿ ಪತ್ತೆಯಾಗಿತ್ತು, ಬನ್ನೇರುಘಟ್ಟ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 23,350 ರೂಪಾಯಿ ಪತ್ತೆಯಾಗಿತ್ತು ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಣದ ಮೂಲದ ಬಗ್ಗೆ ತನಿಖೆ ನಡೆಸಿದ್ದಾರೆ.
ಅಲ್ಲದೇ ಹಣ ಪತ್ತೆ ಬಗ್ಗೆ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ನೋಟೀಸ್ ಗೆ ಉತ್ತರ ನೀಡದಿದ್ದರೆ ಬಂಧಿಸುವ ಸಾಧ್ಯತೆ ಇದೆ.