ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಚಿತ್ರದ ಹಾಡಿನ ಮ್ಯೂಸಿಕ್ ಬಳಸಿದ ಆರೋಪ ಕೇಳಿಬಂದಿದೆ.
ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಸಿನಿಮಾ ಮ್ಯೂಸಿಕ್ ಬಳಸಿದ ಹಿನ್ನೆಲೆಯಲ್ಲಿ ಕಾಪಿ ರೈಟ್ಸ್ ಉಲ್ಲಂಘನೆಯಾಗಿದ್ದು, ಕಾಂಗ್ರೆಸ್ ವಿರುದ್ಧ ಎಂ.ಆರ್.ಟಿ ಸಂಸ್ಥೆ ಕಾನೂನು ಹೋರಾಟಕ್ಕೆ ಮುಂದಾಗಿದೆ.
ಸಂಸ್ಥೆಯ ಅನುಮತಿ ಇಲ್ಲದೇ ಕೆಜಿಎಫ್ ಸಿನಿಮಾ ಸಂಗೀತವನ್ನು ಬಳಸಿಕೊಂಡದ್ದಕ್ಕಾಗಿ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಹಾಗೂ ಭಾರತ್ ಜೋಡೋ ಉಸ್ತುವಾರಿ ಜೈರಾಂ ರಮೇಶ್ ವಿರುದ್ಧ ದೂರು ದಾಖಲಾಗಿದೆ. ಪ್ರಕರಣ ಸಂಬಂಧ ಕೋರ್ಟ್ ನಿರ್ದೇಶನದ ಮೇರೆಗೆ ಯಶವಂತಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಸಿನಿಮಾದ ಸುಲ್ತಾನಾ….ಹಾಡನ್ನು ಬಳಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.