
ನವದೆಹಲಿ: ವಿಕೃತಕಾಮಿ ಉಮೇಶ್ ರೆಡ್ಡಿ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂಗೊಳಿಸಿದ್ದು, ಹೈಕೋರ್ಟ್ ಆದೇಶ ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಉಮೇಶ್ ರೆಡ್ಡಿಗೆ ಸುಪ್ರೀಂ ಕೋರ್ಟ್ ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಸಿಜೆಐ ನೇತೃತ್ವದ ತ್ರಿಸದಸ್ಯ ಪೀಠದಿಂದ ಮರಣದಂಡನೆಗೆ ತಡೆ ನೀಡಲಾಗಿದೆ.
ಕಾನೂನು ಉಲ್ಲಂಘಿಸಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ 10 ವರ್ಷ ಏಕಾಂಗಿಯಾಗಿ ಇರಿಸಲಾಗಿದೆ. ಅಪರಾಧಿ ಯೋಗ ಕ್ಷೇಮದ ಮೇಲೆ ದುಷ್ಪರಿಣಾಮ ಬೀರಿದೆ. ಹೀಗಾಗಿ ಮರಣದಂಡನೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.