ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದು, ಅವರಿಗೆ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ಅದ್ದೂರಿ ಸ್ವಾಗತ ಕೋರಲಾಗುತ್ತಿದೆ.
ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ನಡೆಯಲಿದ್ದು, ರಾಜ್ಯ ಕಾಂಗ್ರೆಸ್ ಸಮಿತಿ ವತಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಲಾಗುತ್ತದೆ.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.