ಸಹಾಯಕ ಪ್ರಾಧ್ಯಾಪಕರ ಹುದ್ದೆಗಾಗಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ.
1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅಲ್ಲದೆ ಪರೀಕ್ಷೆ ಅಂಕಗಳ ಆಧಾರದ ಮೇಲೆ 26 ವಿಷಯಗಳ ಅಭ್ಯರ್ಥಿಗಳ ಪ್ರತ್ಯೇಕ ಪಟ್ಟಿಯನ್ನು ಮೀಸಲಾತಿಗೆ ಅನುಗುಣವಾಗಿ ಪ್ರಕಟ ಮಾಡಲಾಗಿದೆ.
ನವೆಂಬರ್ 9ರಂದು ದಾಖಲೆಗಳ ಪರಿಶೀಲನೆ ಆರಂಭವಾಗಲಿದ್ದು, ಈ ಪ್ರಕ್ರಿಯೆ ನವೆಂಬರ್ 21ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಗಳಂದು ಮೂಲ ದಾಖಲೆಗಳೊಂದಿಗೆ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಹಾಜರಾಗಬೇಕಾಗುತ್ತದೆ.