ಕಳೆದ ಅಕ್ಟೋಬರ್ ತಿಂಗಳಿನಲ್ಲಷ್ಟೇ ಏರಿಕೆಯಾಗಿದ್ದ ಸಿಮೆಂಟ್ ದರ ಈಗ ಮತ್ತೊಮ್ಮೆ ಏರಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಸ್ವಂತ ಸೂರು ನಿರ್ಮಿಸುವ ಕನಸು ಕಂಡವರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ.
ಪ್ರತಿ ಚೀಲ ಸಿಮೆಂಟ್ ದರದಲ್ಲಿ 20 ರಿಂದ 30 ರೂಪಾಯಿಗಳವರೆಗೆ ಏರಿಕೆಯಾಗಲಿದೆ ಎನ್ನಲಾಗಿದ್ದು, ನವೆಂಬರ್ ತಿಂಗಳಿನಿಂದಲೇ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ ತಿಂಗಳಲ್ಲಿ ಪ್ರತಿ ಚೀಲದ ಸಿಮೆಂಟ್ ಬೆಲೆಯಲ್ಲಿ 3 ರಿಂದ 4 ರೂಪಾಯಿ ಏರಿಕೆ ಮಾಡಲಾಗಿತ್ತು. ಆದರೆ ಈ ಬಾರಿ ಅದು 20 ರಿಂದ 30 ರೂಪಾಯಿಗಳವರೆಗೆ ಹೆಚ್ಚಳವಾಗಲಿದೆ. ಕಾರ್ಮಿಕರ ಕೊರತೆ ಎದುರಾಗಿರುವ ಕಾರಣ ಉತ್ಪಾದನೆಯಲ್ಲಿ ಇಳಿಕೆ ಕಂಡಿದ್ದು, ಇದರ ನಷ್ಟ ತುಂಬಿಸಿಕೊಳ್ಳುವ ಸಲುವಾಗಿ ಬೆಲೆ ಹೆಚ್ಚಳ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.