ಇಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ನೋಡಿಕೊಳ್ಳಲು ಬಿಗಿ ಕ್ರಮ ಕೈಗೊಳ್ಳಲಾಗಿದೆ.
ಅಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಗುರುತಿನ ಚೀಟಿ ತರಬೇಕಾಗಿದ್ದು, ಇದಕ್ಕಾಗಿ ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಯಾವುದಾದರೂ ದಾಖಲೆಯನ್ನು ಹೊಂದಿರಬೇಕಾಗಿದೆ.
ಪರೀಕ್ಷಾ ಅವಧಿಯಲ್ಲಿ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ವಲಯವೆಂದು ಘೋಷಿಸಲಾಗಿದ್ದು, ಬೆಳಗ್ಗೆ 9:30 ರಿಂದ ಮಧ್ಯಾಹ್ನ 12:00 ಹಾಗೂ ಮಧ್ಯಾಹ್ನ 2 ರಿಂದ 4:30ರ ವರೆಗೆ ಪರೀಕ್ಷೆಗಳು ನಡೆಯಲಿವೆ.