ಕೋಲಾರ: ಹೆಣ್ಣು ಮಗು ಹುಟ್ಟಿದ್ದಕ್ಕೆ ವ್ಯಕ್ತಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.
ಶ್ರೀನಿವಾಸಪುರದ ಶೆಟ್ಟಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಲೋಕೇಶ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೊದಲು ಮೂವರು ಹೆಣ್ಣುಮಕ್ಕಳಿದ್ದು, ನಾಲ್ಕನೆಯದೂ ಹೆಣ್ಣುಮಗು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಶೆಟ್ಟಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.