ನವೆಂಬರ್ 3ರಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಬಿಹಾರದ ಮೊಕಾಮಾ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಜನತಾದಳ ಗೆಲುವು ಸಾಧಿಸಿದೆ.
ಮೊಕಾಮಾ ಕ್ಷೇತ್ರದಲ್ಲಿ ರಾಷ್ಟ್ರೀಯ ಜನತಾದಳದ ಅಭ್ಯರ್ಥಿ ನೀಲಂ ದೇವಿ ತಮ್ಮ ಸಮೀಪದ ಪ್ರತಿಸ್ಪರ್ಧಿಯನ್ನು 16,000 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.
ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ನೀಲಂ ದೇವಿಯವರ ಪತಿ ಅನಂತ್ ಸಿಂಗ್ ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೊಳ್ಳಗಾದ ಕಾರಣ ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದು, ಹೀಗಾಗಿ ಉಪ ಚುನಾವಣೆ ನಡೆದಿತ್ತು.