ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಬಳಿ ಕಾರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಲುಗಿನಕೊಪ್ಪದ ಜ್ಯೋತಿ(30), ಗಂಗಮ್ಮ(50) ಮತ್ತು ಸೌಜನ್ಯ(4) ಮೃತಪಟ್ಟವರು ಎಂದು ಹೇಳಲಾಗಿದೆ.
ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ರಾತ್ರಿ ಘಟನೆ ನಡೆದಿದೆ. ಮಲ್ಲಿಕಾರ್ಜುನ ಕುಟುಂಬದವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿರೇಕೆರೂರು ಕಡೆಯಿಂದ ಶಿರಾಳಕೊಪ್ಪಕ್ಕೆ ಬರುತ್ತಿದ್ದ ಕಾರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಲ್ಲಿಕಾರ್ಜುನ ಸ್ಥಿತಿ ಗಂಭೀರವಾಗಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.