ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ, ರೈತರ ಆರ್ಥಿಕ ಬೆನ್ನೆಲುಬು ಆಗಿರುವ, ಅಡಕೆ ತೋಟಗಳು, ಎಲೆ ಚುಕ್ಕೆ ರೋಗದಿಂದ ಭಾದಿತವಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ 8 ಕೋಟಿ ರೂಪಾಯಿಗಳ ನೆರವನ್ನು ಔಷಧಿ ಸಿಂಪರಣೆಗೆಂದು, ಘೋಷಣೆ ಮಾಡಿ ಸುಮಾರು 4 ಕೋಟಿ ರೂಪಾಯಿಗಳನ್ನು ಬಿಡುಗಡೆ ಗೊಳಿಸಿದೆ.
ಬೈಂದೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ತೀರ್ಥಹಳ್ಳಿಯ ರೈತ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿದ ಸಂದರ್ಭದಲ್ಲಿ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಹೆಚ್ಚುವರಿಯಾಗಿ 10 ಕೋಟಿ ರೂಪಾಯಿಗಳ ಅನುದಾನ ಘೋಷಿಸಿದ್ದಾರೆ.
ಎಲೆ ಚುಕ್ಕೆ ರೋಗದ ತೀವ್ರತೆಯನ್ನು ಅರಿತು ಹಾಗೂ ಅದರಿಂದ ಆತಂಕಕ್ಕೆ ಒಳಗಾಗಿರುವ ರೈತ ಸಮುದಾಯದ ರಕ್ಷಣೆಗೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ರೈತರ ಪರವಾಗಿ ಧನ್ಯವಾದಗಳು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಅಡಕೆ ಬೆಳೆಗೆ ಎಲೆ ಚುಕ್ಕಿ ರೋಗ ದೊಡ್ಡ ಸಮಸ್ಯೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಹೊಸಹಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಮಾತನಾಡಿದ ಅವರು, ಕೃಷಿ ವಿವಿ, ಕೇಂದ್ರ ತಂಡಗಳು ಅಧ್ಯಯನ ನಡೆಸುತ್ತಿವೆ. ಅಡಿಕೆಗೆ ರೋಗ ಹರಡದಂತೆ ತಡೆಗಟ್ಟಲು ವಿಜ್ಞಾನಿಗಳು ಸಲಹೆ ನೀಡಿದ್ದಾರೆ. ರೋಗದ ಮೂಲ ತಿಳಿದುಕೊಂಡು ಸೂಕ್ತ ಔಷಧಿ ಪತ್ತೆ ಹಚ್ಚುತ್ತೇವೆ. ಔಷಧಿ ಸಿಂಪಡಿಸಿ ಎಲೆಗೆ ಬಿಳಿ ಚುಕ್ಕಿ ರೋಗ ತಡೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.