ಹಿಂದೂ ಎಂಬುದು ಪರ್ಷಿಯನ್ ನೆಲಕ್ಕೆ ಸೇರಿದ ಪದ. ಇದನ್ನು ಕೆಲವರು ನಮ್ಮ ಮೇಲೆ ಹೇರುತ್ತಿದ್ದಾರೆ. ಈ ಪದದ ಅರ್ಥ ತಿಳಿದರೆ ನಾಚಿಕೆಯಾಗುತ್ತದೆ ಎಂಬ ಹೇಳಿಕೆ ನೀಡಿದ್ದ ಸತೀಶ್ ಜಾರಕಿಹೊಳಿ, ಇದು ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಈಗ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಸ್ಪಷ್ಟನೆ ನೀಡಿರುವ ಅವರು, ನನ್ನ ಭಾಷಣವನ್ನು ಕೆಲ ಮಾಧ್ಯಮದವರು ತಪ್ಪಾಗಿ ಅರ್ಥೈಸಿದ್ದಾರೆ. ಹಿಂದೂ ಪದವು ಪರ್ಷಿಯನ್ ಮೂಲದ್ದು ಎಂಬದಕ್ಕೆ ದಾಖಲೆಗಳಿವೆ. ಇದರ ಕುರಿತು ಚರ್ಚೆ ಆಗಬೇಕು ಎಂದು ಹೇಳಿದ್ದೇನೆ ಹೊರತು ಹಿಂದೂ ಪದದ ಕುರಿತು ನಿಂದನೆ ಮಾಡಿಲ್ಲ ಎಂದಿದ್ದಾರೆ.
ಇನ್ನು ಸತೀಶ್ ಜಾರಕಿಹೊಳಿಯವರ ಹೇಳಿಕೆ ಕುರಿತಂತೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸತೀಶ್ ಜಾರಕಿಹೊಳಿಯವರ ಹೇಳಿಕೆ ದುರದೃಷ್ಟಕರ. ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.