ಕರಾವಳಿ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಭಾಗದಲ್ಲಿ ಬೆಳೆಯುವ ಕುಚಲಕ್ಕಿ ಭತ್ತವನ್ನು ರೈತರಿಂದ ನೇರವಾಗಿ ಖರೀದಿಸಿ ಕರಾವಳಿ ಜಿಲ್ಲೆಗಳ ಬಿಪಿಎಲ್ ಪಡಿತರದಾರರಿಗೆ ಕುಚಲಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ.
ಸೋಮವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಮಾಹಿತಿ ನೀಡಿದ್ದು, ಪಡಿತರದಲ್ಲಿ ಕುಚಲಕ್ಕಿ ವಿತರಿಸಬೇಕೆಂಬ ಕರಾವಳಿ ಜಿಲ್ಲೆಗಳ ಜನತೆಯ ಬಹುಕಾಲದ ಬೇಡಿಕೆಯನ್ನು ಈ ಮೂಲಕ ರಾಜ್ಯ ಸರ್ಕಾರ ಈಡೇರಿಸುತ್ತಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸುವ ಕುರಿತಂತೆ ಬೆಂಗಳೂರಿಗೆ ತೆರಳಿ ಸಭೆ ನಡೆಸಿದ ಬಳಿಕ ಮುಂದಿನ ವಾರದೊಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.