ಸಿಡ್ನಿಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಸುಮಾರು 48,000 ಮಂದಿ ಕೂರಬಹುದಾದ ಈ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಭಾರತದ ಅಭಿಮಾನಿಗಳು ಆಗಮಿಸಲಿದ್ದಾರೆ.
ನೆದರ್ ಲ್ಯಾಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ಸೋತ ಬಳಿಕ ಪಾಕಿಸ್ತಾನಕ್ಕೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಸಿಕ್ಕಿದೆ. ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳಲ್ಲಿ ಬೌಲರ್ ಗಳ ಅಬ್ಬರ ಜೋರಾಗಿದ್ದು ನಾಳೆ ಗೆದ್ದ ತಂಡ ಫೈನಲ್ ಪ್ರವೇಶಿಸಲಿದೆ.
ಪಾಕಿಸ್ತಾನ ತಂಡದ ಆರಂಭಿಕ ಬ್ಯಾಟ್ಸ್ ಮೆನ್ ಗಳಾದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಜ್ವಾನ್ ವಿಕೆಟ್ ನೀಡದೇ ಭರ್ಜರಿ ಜೊತೆಯಾಟವನ್ನು ಆಡಿರುವುದನ್ನು ನಾವು ನೋಡಿದ್ದೇವೆ.
ನಾಯಕ ಬಾಬರ್ ಅಜಾಮ್ ಮತ್ತೆ ಫಾರ್ಮ್ ಗೆ ಮರಳಿರುವುದು ಪಾಕಿಸ್ತಾನ ತಂಡಕ್ಕೆ ಆನೆ ಬಲ ಬಂದಂತಿದೆ. ಇನ್ನು ನ್ಯೂಜಿಲ್ಯಾಂಡ್ ತಂಡದಲ್ಲಿ ಸ್ಫೋಟಕ ಬ್ಯಾಟಿಂಗ್ ನಿಂದಲೇ ಬೌಲರ್ ಗಳ ಬೆವರಿಳಿಸುವ ಗ್ಲೇನ್ ಫಿಲಿಪ್ಸ್ ಹಾಗೂ ಫಿನ್ ಅಲೆನ್ ಅವರ ಬ್ಯಾಟಿಂಗ್ ನೋಡಲು ನ್ಯೂಜಿಲ್ಯಾಂಡ್ ಪ್ರೇಕ್ಷಕರು ಕಾಯುತ್ತಿದ್ದಾರೆ.