ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆ ಈಗ ಸ್ವಲ್ಪ ಬಿಡುವು ನೀಡಿದೆ. ಚಳಿ ಆರಂಭವಾಗಿದ್ದು, ಇದರ ಮಧ್ಯೆ ಮಳೆ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಒಂದನ್ನು ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ತಮಿಳುನಾಡು, ಪುದುಚೇರಿ, ಕೇರಳ ಹಾಗೂ ಕಾರೈಕಲ್ ಭಾಗಗಳಲ್ಲಿ ಮಳೆಯಾಗುತ್ತಿದ್ದು, ತೇವಾಂಶ ಭರಿತ ಮೋಡಗಳು ಕರ್ನಾಟಕದತ್ತ ಚಲಿಸುತ್ತಿವೆ.
ಹೀಗಾಗಿ ಈ ವಾರಾಂತ್ಯಕ್ಕೆ ರಾಜ್ಯದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಆಗಲಿದ್ದು, ಉಡುಪಿ, ದಕ್ಷಿಣ ಕನ್ನಡ ಭಾಗಗಳಲ್ಲಿ ಇಂದು ಗುಡುಗು ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.