alex Certify BIG NEWS: ಟಿವಿ ಗಳಲ್ಲಿ ಪ್ರತಿನಿತ್ಯ 30 ನಿಮಿಷಗಳ ಕಾಲ ‘ರಾಷ್ಟ್ರೀಯ ಹಿತಾಸಕ್ತಿ’ಕಾರ್ಯಕ್ರಮ ಪ್ರಸಾರ ಮಾಡುವುದು ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಿವಿ ಗಳಲ್ಲಿ ಪ್ರತಿನಿತ್ಯ 30 ನಿಮಿಷಗಳ ಕಾಲ ‘ರಾಷ್ಟ್ರೀಯ ಹಿತಾಸಕ್ತಿ’ಕಾರ್ಯಕ್ರಮ ಪ್ರಸಾರ ಮಾಡುವುದು ಕಡ್ಡಾಯ

ಖಾಸಗಿ ಹಾಗೂ ಸರ್ಕಾರಿ ಟಿವಿ ವಾಹಿನಿಗಳ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಒಂದನ್ನು ಕೈಗೊಂಡಿದ್ದು, ಪ್ರತಿನಿತ್ಯ 30 ನಿಮಿಷಗಳ ಕಾಲ ರಾಷ್ಟ್ರೀಯ ಹಾಗೂ ಸಾರ್ವಜನಿಕ ಹಿತಾಸಕ್ತಿ ಕುರಿತ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದು ಕಡ್ಡಾಯವಾಗಲಿದೆ. ನವೆಂಬರ್ 9 ರಿಂದಲೇ ಇದು ಜಾರಿಗೆ ಬಂದಿದೆ.

ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ 8 ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಇದನ್ನು ಆಧರಿಸಿ ಕಾರ್ಯಕ್ರಮ ರೂಪಿಸಬೇಕಾಗುತ್ತದೆ. ಸಾರ್ವಜನಿಕರಲ್ಲಿ ರಾಷ್ಟ್ರೀಯ ಹಿತಾಸಕ್ತಿ ಅರಿವು ಮೂಡಿಸುವುದರ ಜೊತೆಗೆ ಅವರಲ್ಲೂ ಸಹ ಸಾಮಾಜಿಕ ಕಾರ್ಯಕ್ರಮಗಳ ಕುರಿತ ಚಿಂತನೆ ಮೂಡಿಸುವುದು ಇದರ ಹಿಂದಿನ ಉದ್ದೇಶವಾಗಿದೆ.

ಟಿವಿ ವಾಹಿನಿಗಳು ಶಿಕ್ಷಣ ಮತ್ತು ಸಾಕ್ಷರತೆ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಿಜ್ಞಾನ ಮತ್ತು ತಂತ್ರಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜದಲ್ಲಿ ಹಿಂದುಳಿದ ವರ್ಗಗಳ ಹಿತಾಸಕ್ತಿ, ಪರಿಸರ ಸಂರಕ್ಷಣೆ ಮತ್ತು ಸಂಸ್ಕೃತಿ ಹಾಗೂ ರಾಷ್ಟ್ರೀಯ ಚಿಂತನೆ ಕುರಿತಂತೆ ಒಟ್ಟು ಎಂಟು ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಇದರಡಿ ಪ್ರತಿನಿತ್ಯ 30 ನಿಮಿಷಗಳ ಕಾಲ ಕಾರ್ಯಕ್ರಮ ಮಾಡಬೇಕಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...